ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ

ಒಂದು ಭಾಷೆಯಲ್ಲಿ ಬರುವ ಪದಗಳ ಮತ್ತು ವಾಕ್ಯಗಳ ಒಳರಚನೆಯೆಂತಹದು ಎಂಬುದನ್ನು ವಿವರಿಸಿ ಹೇಳುವುದೇ ವ್ಯಾಕರಣದ ಮುಖ್ಯ ಉದ್ದೇಶ. ಕನ್ನಡದಲ್ಲಿ ಪ್ರಕಟವಾಗಿರುವ ವ್ಯಾಕರಣಗಳಾವುವೂ ಈ ಉದ್ದೇಶವನ್ನು ಸಾಧಿಸುವಲ್ಲಿ ಸಫಲವಾಗಿಲ್ಲ. ಅವೆಲ್ಲ ಮುಖ್ಯವಾಗಿ ಸಂಸ್ಕೃತದ ವ್ಯಾಕರಣ ನಿಯಮಗಳನ್ನು ಹಾಗೆಯೇ ಕನ್ನಡಕ್ಕೆ ಅಳವಡಿಸಲು ಪ್ರಯತ್ನಿಸುತ್ತವೆ. ಈ ನಿಯಮಗಳು ಕನ್ನಡ ವ್ಯಾಕರಣ ನಿಯಮಗಳಿಗಿಂತ ಬಹಳಷ್ಟು ಭಿನ್ನವಾಗಿವೆಯಾದ ಕಾರಣ ಕನ್ನಡ ಪದಗಳ ಮತ್ತು ವಾಕ್ಯಗಳ ರಚನೆಯನ್ನು ಸರಿಯಾಗಿ . ನಿಜಕ್ಕೂ ಕನ್ನಡ ವ್ಯಾಕರಣ ನಿಯಮಗಳು ಎಂತಹದು, ಕನ್ನಡ ವ್ಯಾಕರಣಗಳಲ್ಲಿ ಅದರಲ್ಲೂ ಶಾಲೆಗಳಲ್ಲಿ ಮಕ್ಕಳಿಗೆ ಕಲಿಸುವ ವ್ಯಾಕರಣಗಳಲ್ಲಿ ಬರುವ ನಿಯಮಗಳಿಗಿಂತ ಅವು ಹೇಗೆ ಭಿನ್ನವಾಗಿವೆ ಎಂಬುದನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ.

ಈ ಪುಸ್ತಕವನ್ನು ಇಲ್ಲಿ ಕೊಂಡುಕೊಳ್ಳಿರಿ.