ಕೇಶಿರಾಜನೇ ಮೊದಲಾದ ಹಳೆಗನ್ನಡ ವೈಯಾಕರಣಿಗಳು ಸಂಸ್ಕೃತದ ವ್ಯಾಕರಣ ನಿಯಮಗಳನ್ನು ಹಾಗೆಯೇ ಹಳೆಗನ್ನಡಕ್ಕೆ ಅಳವಡಿಸಲು ಸಾಧ್ಯ ಎಂಬ ಭ್ರಮೆಯಲ್ಲಿದ್ದರು. ಈ ಭ್ರಮೆಯಿಂದಾಗಿ ಅವರು ತಮ್ಮ ವ್ಯಾಕರಣಗಳ ಹೆಚ್ಚಿನ ವಿಭಾಗಗಳಲ್ಲೂ ಹಳೆಗನ್ನಡ ವ್ಯಾಕರಣದ ನಿಜವಾದ ಸ್ವರೂಪ ಎಂತಹದು ಎಂಬುದನ್ನು ವಿವರಿಸಿ ಹೇಳುವಲ್ಲಿ ಎಡವಿದ್ದಾರೆ.
ಇದನ್ನು ಈ ಪುಸ್ತಕದಲ್ಲಿ ಸ್ಪಷ್ಟವಾಗಿ ತೋರಿಸಿಕೊಡಲಾಗಿದೆ.